Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 41

ಕೀರ್ತ 41:2-10

Help us?
Click on verse(s) to share them!
2ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!
3ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ, ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ.
4ನಾನಂತೂ, “ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು” ಅಂದೆನು.
5ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, “ಅವನು ಯಾವಾಗ ಸತ್ತಾನು? ಅವನ ಹೆಸರು ಯಾವಾಗ ಇಲ್ಲದೆ ಹೋದೀತು?” ಎಂದು ಹೇಳಿಕೊಳ್ಳುತ್ತಾರೆ.
6ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು; ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ.
7ನನ್ನ ಹಗೆಯವರೆಲ್ಲರು ನನಗೆ ವಿರುದ್ಧವಾಗಿ ಕಿವಿಗಳಲ್ಲಿ ಗುಜುಗುಜು ಮಾತನಾಡಿಕೊಳ್ಳುತ್ತಾರೆ; ನನಗೆ ಕೇಡುಮಾಡಲು ಪರಸ್ಪರ ಆಲೋಚಿಸುತ್ತಾರೆ.
8“ಅವನನ್ನು ಅಸಾಧ್ಯರೋಗ ಹಿಡಿದಿದೆ; ಅವನು ಹಾಸಿಗೆಯನ್ನು ಬಿಟ್ಟು ತಿರುಗಿ ಏಳುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.
9ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.
10ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು.

Read ಕೀರ್ತ 41ಕೀರ್ತ 41
Compare ಕೀರ್ತ 41:2-10ಕೀರ್ತ 41:2-10