Text copied!
Bibles in Kannada

ಕೀರ್ತ 41:6-11 in Kannada

Help us?

ಕೀರ್ತ 41:6-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು; ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ.
7 ನನ್ನ ಹಗೆಯವರೆಲ್ಲರು ನನಗೆ ವಿರುದ್ಧವಾಗಿ ಕಿವಿಗಳಲ್ಲಿ ಗುಜುಗುಜು ಮಾತನಾಡಿಕೊಳ್ಳುತ್ತಾರೆ; ನನಗೆ ಕೇಡುಮಾಡಲು ಪರಸ್ಪರ ಆಲೋಚಿಸುತ್ತಾರೆ.
8 “ಅವನನ್ನು ಅಸಾಧ್ಯರೋಗ ಹಿಡಿದಿದೆ; ಅವನು ಹಾಸಿಗೆಯನ್ನು ಬಿಟ್ಟು ತಿರುಗಿ ಏಳುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.
9 ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.
10 ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು.
11 ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು.
ಕೀರ್ತ 41 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019