Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 42

ಕೀರ್ತ 42:3-6

Help us?
Click on verse(s) to share them!
3“ನಿನ್ನ ದೇವರು ಎಲ್ಲಿ?” ಎಂದು ಜನರು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ, ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.
4ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.
5ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
6ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದುದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೋನ್ ಪರ್ವತ, ಮಿಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.

Read ಕೀರ್ತ 42ಕೀರ್ತ 42
Compare ಕೀರ್ತ 42:3-6ಕೀರ್ತ 42:3-6