8ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು; ರಾತ್ರಿ ವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವುದು. ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು.
9ನಾನು ನನ್ನ ಶರಣನಿಗೆ, “ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದಿ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?” ಎಂದು ಮೊರೆಯಿಡುವೆನು.
10ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.
11ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.