Text copied!
Bibles in Kannada

ಕೀರ್ತ 44:1-8 in Kannada

Help us?

ಕೀರ್ತ 44:1-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 1 ಪ್ರಧಾನಗಾಯಕನ ಕೀರ್ತನಸಂಹಗ್ರದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ. ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ, ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು.
2 ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.
3 ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.
4 ದೇವರೇ, ನೀನೇ ನನ್ನ ಅರಸನು; ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.
5 ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು; ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು.
6 ನಾನು ನನ್ನ ಬಿಲ್ಲಿನಲ್ಲಿ ಭರವಸವಿಡುವುದಿಲ್ಲ; ಇಲ್ಲವೇ ನನ್ನ ಕತ್ತಿಯು ನನ್ನನ್ನು ರಕ್ಷಿಸಲಾರದು.
7 ಹಿಂಸಕರಿಂದ ಬಿಡಿಸಿದವನು ನೀನೇ; ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಾತನು ನೀನೇ.
8 ದೇವರೇ, ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ; ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು.
ಕೀರ್ತ 44 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019