14ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದಮಾಡಿದಿ; ಅವರು ನಮ್ಮನ್ನು ನೋಡಿ ತಲೆಯಾಡಿಸುತ್ತಾರೆ.
15ದೂಷಕರ ನಿಂದಾವಚನಗಳಿಂದಲೂ, ಮುಯ್ಯಿತೀರಿಸುವ ವೈರಿಗಳ ದೃಷ್ಟಿಯಿಂದಲೂ,
16ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ; ನಾಚಿಕೆಯು ನನ್ನ ಮುಖವನ್ನು ಮುಚ್ಚಿದೆ.
17ನಾವು ನಿನ್ನನ್ನು ಮರೆಯದೆಯೂ, ನಿನ್ನ ನಿಬಂಧನೆಗಳನ್ನು ಮೀರದೆಯೂ ಇದ್ದರೂ; ಇದೆಲ್ಲಾ ನಮ್ಮ ಮೇಲೆ ಬಂದಿದೆಯಲ್ಲಾ!
18ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ದಾರಿಯಿಂದ ತೊಲಗಲಿಲ್ಲ.
19ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?
20ನಾವು ನಮ್ಮ ದೇವರ ಹೆಸರನ್ನು ಮರೆತು, ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ,
21ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ?