Text copied!
Bibles in Kannada

ಕೀರ್ತ 44:15-26 in Kannada

Help us?

ಕೀರ್ತ 44:15-26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೂಷಕರ ನಿಂದಾವಚನಗಳಿಂದಲೂ, ಮುಯ್ಯಿತೀರಿಸುವ ವೈರಿಗಳ ದೃಷ್ಟಿಯಿಂದಲೂ,
16 ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ; ನಾಚಿಕೆಯು ನನ್ನ ಮುಖವನ್ನು ಮುಚ್ಚಿದೆ.
17 ನಾವು ನಿನ್ನನ್ನು ಮರೆಯದೆಯೂ, ನಿನ್ನ ನಿಬಂಧನೆಗಳನ್ನು ಮೀರದೆಯೂ ಇದ್ದರೂ; ಇದೆಲ್ಲಾ ನಮ್ಮ ಮೇಲೆ ಬಂದಿದೆಯಲ್ಲಾ!
18 ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ದಾರಿಯಿಂದ ತೊಲಗಲಿಲ್ಲ.
19 ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?
20 ನಾವು ನಮ್ಮ ದೇವರ ಹೆಸರನ್ನು ಮರೆತು, ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ,
21 ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ?
22 ದೇವರೇ, ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ.
23 ಕರ್ತನೇ, ಏಕೆ ನಿದ್ರಿಸುತ್ತೀ? ಎಚ್ಚರವಾಗು; ಏಳು, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡ.
24 ಏಕೆ ವಿಮುಖನಾಗಿದ್ದಿ? ನಮಗಿರುವ ಬಾಧೆಗಳನ್ನೂ, ಹಿಂಸೆಗಳನ್ನೂ ಏಕೆ ಲಕ್ಷಿಸುವುದಿಲ್ಲ?
25 ನಮ್ಮ ಪ್ರಾಣವು ಧೂಳಿನವರೆಗೂ ಬಗ್ಗಿಹೋಗಿದೆ; ನಮ್ಮ ಶರೀರವು ನೆಲಕ್ಕೆ ಅಂಟಿಕೊಂಡಿದೆ.
26 ಎದ್ದು ಬಂದು ಸಹಾಯಮಾಡು; ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಗಾಗಿ ನಮ್ಮನ್ನು ವಿಮೋಚಿಸು.
ಕೀರ್ತ 44 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019