Text copied!
Bibles in Kannada

ಕೀರ್ತ 44:19-24 in Kannada

Help us?

ಕೀರ್ತ 44:19-24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?
20 ನಾವು ನಮ್ಮ ದೇವರ ಹೆಸರನ್ನು ಮರೆತು, ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ,
21 ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ?
22 ದೇವರೇ, ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ.
23 ಕರ್ತನೇ, ಏಕೆ ನಿದ್ರಿಸುತ್ತೀ? ಎಚ್ಚರವಾಗು; ಏಳು, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡ.
24 ಏಕೆ ವಿಮುಖನಾಗಿದ್ದಿ? ನಮಗಿರುವ ಬಾಧೆಗಳನ್ನೂ, ಹಿಂಸೆಗಳನ್ನೂ ಏಕೆ ಲಕ್ಷಿಸುವುದಿಲ್ಲ?
ಕೀರ್ತ 44 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019