19ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?
20ನಾವು ನಮ್ಮ ದೇವರ ಹೆಸರನ್ನು ಮರೆತು, ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ,
21ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ?
22ದೇವರೇ, ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ.
23ಕರ್ತನೇ, ಏಕೆ ನಿದ್ರಿಸುತ್ತೀ? ಎಚ್ಚರವಾಗು; ಏಳು, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡ.
24ಏಕೆ ವಿಮುಖನಾಗಿದ್ದಿ? ನಮಗಿರುವ ಬಾಧೆಗಳನ್ನೂ, ಹಿಂಸೆಗಳನ್ನೂ ಏಕೆ ಲಕ್ಷಿಸುವುದಿಲ್ಲ?
25ನಮ್ಮ ಪ್ರಾಣವು ಧೂಳಿನವರೆಗೂ ಬಗ್ಗಿಹೋಗಿದೆ; ನಮ್ಮ ಶರೀರವು ನೆಲಕ್ಕೆ ಅಂಟಿಕೊಂಡಿದೆ.
26ಎದ್ದು ಬಂದು ಸಹಾಯಮಾಡು; ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಗಾಗಿ ನಮ್ಮನ್ನು ವಿಮೋಚಿಸು.