2ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.
3ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.
4ದೇವರೇ, ನೀನೇ ನನ್ನ ಅರಸನು; ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.
5ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು; ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು.