Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 44

ಕೀರ್ತ 44:4-17

Help us?
Click on verse(s) to share them!
4ದೇವರೇ, ನೀನೇ ನನ್ನ ಅರಸನು; ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.
5ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು; ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು.
6ನಾನು ನನ್ನ ಬಿಲ್ಲಿನಲ್ಲಿ ಭರವಸವಿಡುವುದಿಲ್ಲ; ಇಲ್ಲವೇ ನನ್ನ ಕತ್ತಿಯು ನನ್ನನ್ನು ರಕ್ಷಿಸಲಾರದು.
7ಹಿಂಸಕರಿಂದ ಬಿಡಿಸಿದವನು ನೀನೇ; ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಾತನು ನೀನೇ.
8ದೇವರೇ, ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ; ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು.
9ಆದರೆ ಈಗ ನೀನು ನಮ್ಮನು ಕೈಬಿಟ್ಟಿದ್ದೀ, ಅವಮಾನಪಡಿಸಿದಿ; ನಮ್ಮ ಸೈನ್ಯಗಳ ಸಂಗಡ ನೀನು ಹೋಗಲಿಲ್ಲ.
10ನಾವು ಹಗೆಗಳಿಗೆ ಬೆನ್ನುಕೊಟ್ಟು ಓಡಿಹೋಗುವಂತೆ ಮಾಡಿದಿ; ನಮ್ಮ ವೈರಿಗಳು ತಮಗೋಸ್ಕರ ಬೇಕಾದ ಹಾಗೆ ಕೊಳ್ಳೆಹೊಡೆಯುತ್ತಾರೆ.
11ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀ.
12ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ, ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ.
13ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದಿ; ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ, ಕುಚೋದ್ಯಕ್ಕೂ ಒಳಪಡಿಸಿದಿ.
14ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದಮಾಡಿದಿ; ಅವರು ನಮ್ಮನ್ನು ನೋಡಿ ತಲೆಯಾಡಿಸುತ್ತಾರೆ.
15ದೂಷಕರ ನಿಂದಾವಚನಗಳಿಂದಲೂ, ಮುಯ್ಯಿತೀರಿಸುವ ವೈರಿಗಳ ದೃಷ್ಟಿಯಿಂದಲೂ,
16ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ; ನಾಚಿಕೆಯು ನನ್ನ ಮುಖವನ್ನು ಮುಚ್ಚಿದೆ.
17ನಾವು ನಿನ್ನನ್ನು ಮರೆಯದೆಯೂ, ನಿನ್ನ ನಿಬಂಧನೆಗಳನ್ನು ಮೀರದೆಯೂ ಇದ್ದರೂ; ಇದೆಲ್ಲಾ ನಮ್ಮ ಮೇಲೆ ಬಂದಿದೆಯಲ್ಲಾ!

Read ಕೀರ್ತ 44ಕೀರ್ತ 44
Compare ಕೀರ್ತ 44:4-17ಕೀರ್ತ 44:4-17