Text copied!
Bibles in Kannada

ಕೀರ್ತ 44:6-11 in Kannada

Help us?

ಕೀರ್ತ 44:6-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ನನ್ನ ಬಿಲ್ಲಿನಲ್ಲಿ ಭರವಸವಿಡುವುದಿಲ್ಲ; ಇಲ್ಲವೇ ನನ್ನ ಕತ್ತಿಯು ನನ್ನನ್ನು ರಕ್ಷಿಸಲಾರದು.
7 ಹಿಂಸಕರಿಂದ ಬಿಡಿಸಿದವನು ನೀನೇ; ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಾತನು ನೀನೇ.
8 ದೇವರೇ, ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ; ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು.
9 ಆದರೆ ಈಗ ನೀನು ನಮ್ಮನು ಕೈಬಿಟ್ಟಿದ್ದೀ, ಅವಮಾನಪಡಿಸಿದಿ; ನಮ್ಮ ಸೈನ್ಯಗಳ ಸಂಗಡ ನೀನು ಹೋಗಲಿಲ್ಲ.
10 ನಾವು ಹಗೆಗಳಿಗೆ ಬೆನ್ನುಕೊಟ್ಟು ಓಡಿಹೋಗುವಂತೆ ಮಾಡಿದಿ; ನಮ್ಮ ವೈರಿಗಳು ತಮಗೋಸ್ಕರ ಬೇಕಾದ ಹಾಗೆ ಕೊಳ್ಳೆಹೊಡೆಯುತ್ತಾರೆ.
11 ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀ.
ಕೀರ್ತ 44 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019