Text copied!
Bibles in Kannada

ಕೀರ್ತ 44:7-19 in Kannada

Help us?

ಕೀರ್ತ 44:7-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹಿಂಸಕರಿಂದ ಬಿಡಿಸಿದವನು ನೀನೇ; ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಾತನು ನೀನೇ.
8 ದೇವರೇ, ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ; ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು.
9 ಆದರೆ ಈಗ ನೀನು ನಮ್ಮನು ಕೈಬಿಟ್ಟಿದ್ದೀ, ಅವಮಾನಪಡಿಸಿದಿ; ನಮ್ಮ ಸೈನ್ಯಗಳ ಸಂಗಡ ನೀನು ಹೋಗಲಿಲ್ಲ.
10 ನಾವು ಹಗೆಗಳಿಗೆ ಬೆನ್ನುಕೊಟ್ಟು ಓಡಿಹೋಗುವಂತೆ ಮಾಡಿದಿ; ನಮ್ಮ ವೈರಿಗಳು ತಮಗೋಸ್ಕರ ಬೇಕಾದ ಹಾಗೆ ಕೊಳ್ಳೆಹೊಡೆಯುತ್ತಾರೆ.
11 ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀ.
12 ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ, ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ.
13 ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದಿ; ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ, ಕುಚೋದ್ಯಕ್ಕೂ ಒಳಪಡಿಸಿದಿ.
14 ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದಮಾಡಿದಿ; ಅವರು ನಮ್ಮನ್ನು ನೋಡಿ ತಲೆಯಾಡಿಸುತ್ತಾರೆ.
15 ದೂಷಕರ ನಿಂದಾವಚನಗಳಿಂದಲೂ, ಮುಯ್ಯಿತೀರಿಸುವ ವೈರಿಗಳ ದೃಷ್ಟಿಯಿಂದಲೂ,
16 ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ; ನಾಚಿಕೆಯು ನನ್ನ ಮುಖವನ್ನು ಮುಚ್ಚಿದೆ.
17 ನಾವು ನಿನ್ನನ್ನು ಮರೆಯದೆಯೂ, ನಿನ್ನ ನಿಬಂಧನೆಗಳನ್ನು ಮೀರದೆಯೂ ಇದ್ದರೂ; ಇದೆಲ್ಲಾ ನಮ್ಮ ಮೇಲೆ ಬಂದಿದೆಯಲ್ಲಾ!
18 ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ದಾರಿಯಿಂದ ತೊಲಗಲಿಲ್ಲ.
19 ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?
ಕೀರ್ತ 44 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019