Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 45

ಕೀರ್ತ 45:1-6

Help us?
Click on verse(s) to share them!
11 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋಶನ್ನೀಮ್ ಎಂಬ ರಾಗದ ಮೇಲೆ ಹಾಡತಕ್ಕದ್ದು; ಕೋರಹೀಯರ ಪದ್ಯ; ಪ್ರೇಮಗೀತೆ. ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.
2ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹು ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ.
3ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.
4ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ ಸಕಲ ವೈಭವದೊಡನೆ ವಾಹನರೂಢನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ.
5ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು.
6ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ.

Read ಕೀರ್ತ 45ಕೀರ್ತ 45
Compare ಕೀರ್ತ 45:1-6ಕೀರ್ತ 45:1-6