Text copied!
Bibles in Kannada

ಕೀರ್ತ 45:1-8 in Kannada

Help us?

ಕೀರ್ತ 45:1-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋಶನ್ನೀಮ್ ಎಂಬ ರಾಗದ ಮೇಲೆ ಹಾಡತಕ್ಕದ್ದು; ಕೋರಹೀಯರ ಪದ್ಯ; ಪ್ರೇಮಗೀತೆ. ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.
2 ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹು ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ.
3 ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.
4 ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ ಸಕಲ ವೈಭವದೊಡನೆ ವಾಹನರೂಢನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ.
5 ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು.
6 ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ.
7 ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.
8 ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ.
ಕೀರ್ತ 45 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019