Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 45

ಕೀರ್ತ 45:5-9

Help us?
Click on verse(s) to share them!
5ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು.
6ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ.
7ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.
8ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ.
9ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ; ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಆಭರಣಗಳಿಂದ ಅಲಂಕೃತಳಾಗಿ, ನಿನ್ನ ಬಲಭಾಗದಲ್ಲಿ ನಿಂತಿರುವಳು.

Read ಕೀರ್ತ 45ಕೀರ್ತ 45
Compare ಕೀರ್ತ 45:5-9ಕೀರ್ತ 45:5-9