9 ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ; ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಆಭರಣಗಳಿಂದ ಅಲಂಕೃತಳಾಗಿ, ನಿನ್ನ ಬಲಭಾಗದಲ್ಲಿ ನಿಂತಿರುವಳು.
10 ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು.
11 ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನನ್ನು ಗೌರವಿಸು.
12 ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು.
13 ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.
14 ಆಕೆಯು ಬೂಟೇದಾರಿ ವಸ್ತ್ರಗಳನ್ನು ಧರಿಸಿಕೊಂಡು, ಅವಳ ಸೇವೆಗಾಗಿ ಕನ್ಯೆಯರಾದ ಸಖೀಯರು ಅವಳನ್ನು ಹಿಂಬಾಲಿಸಿ, ಅರಸನ ಬಳಿಗೆ ಬರುವರು.
15 ಅವರು ಉಲ್ಲಾಸದಿಂದಲೂ, ಸಂತೋಷದಿಂದಲೂ ಬಂದು, ಅರಮನೆಯೊಳಗೆ ಪ್ರವೇಶಿಸುವರು.
16 ನಿನ್ನ ಪೂರ್ವಿಕರ ಸ್ಥಳಗಳಲ್ಲಿ ನಿನ್ನ ಮಕ್ಕಳು ಇರುವರು; ನೀನು ಅವರನ್ನು ಭೂಮಿಯ ಮೇಲೆಲ್ಲಾ ಅಧಿಕಾರಿಗಳನ್ನಾಗಿ ನೇಮಿಸುವಿ.
17 ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು; ಅದುದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಪ್ರಶಂಸಿಸುವರು.