Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 46

ಕೀರ್ತ 46:1-8

Help us?
Click on verse(s) to share them!
11 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು. ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
2ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ.
3ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? ಸೆಲಾ
4ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ.
5ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.
6ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.
7ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ
8ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ.

Read ಕೀರ್ತ 46ಕೀರ್ತ 46
Compare ಕೀರ್ತ 46:1-8ಕೀರ್ತ 46:1-8