Text copied!
Bibles in Kannada

ಕೀರ್ತ 46:3-10 in Kannada

Help us?

ಕೀರ್ತ 46:3-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? ಸೆಲಾ
4 ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ.
5 ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.
6 ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.
7 ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ
8 ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ.
9 ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.
10 “ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.
ಕೀರ್ತ 46 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019