5ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.
6ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.
7ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ
8ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ.
9ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.