5ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.
6ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ.
7ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.
8ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.