Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 48

ಕೀರ್ತ 48:1-8

Help us?
Click on verse(s) to share them!
1ಹಾಡು; ಕೋರಹೀಯರ ಕೀರ್ತನೆ. ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.
2ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು.
3ದೇವರು ಅದರ ಕೊತ್ತಲುಗಳಲ್ಲಿ, ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು.
4ರಾಜರು ಕೂಡಿಕೊಂಡರು; ಅವರು ಒಗ್ಗಟ್ಟಾಗಿ ಬಂದರು.
5ನೋಡಿ ಬೆರಗಾದರು; ತಲ್ಲಣಿಸಿ ಓಡಿಹೋದರು.
6ಕಂಪನವೂ ಹೆರುವವಳಂತೆ, ವೇದನೆಯೂ ಅವರಿಗೆ ಉಂಟಾಯಿತು.
7ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.
8ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. ಸೆಲಾ

Read ಕೀರ್ತ 48ಕೀರ್ತ 48
Compare ಕೀರ್ತ 48:1-8ಕೀರ್ತ 48:1-8