Text copied!
Bibles in Kannada

ಕೀರ್ತ 48:3-12 in Kannada

Help us?

ಕೀರ್ತ 48:3-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವರು ಅದರ ಕೊತ್ತಲುಗಳಲ್ಲಿ, ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು.
4 ರಾಜರು ಕೂಡಿಕೊಂಡರು; ಅವರು ಒಗ್ಗಟ್ಟಾಗಿ ಬಂದರು.
5 ನೋಡಿ ಬೆರಗಾದರು; ತಲ್ಲಣಿಸಿ ಓಡಿಹೋದರು.
6 ಕಂಪನವೂ ಹೆರುವವಳಂತೆ, ವೇದನೆಯೂ ಅವರಿಗೆ ಉಂಟಾಯಿತು.
7 ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.
8 ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. ಸೆಲಾ
9 ದೇವರೇ, ನಾವು ನಿನ್ನ ಆಲಯದಲ್ಲಿ, ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ;
10 ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ, ಲೋಕವೆಲ್ಲಾ ನಿನ್ನನ್ನು ಹೊಗಳುವುದು. ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು.
11 ಚೀಯೋನ್ ಪಟ್ಟಣದವರು ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ, ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ.
12 ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ, ಅದರ ಬುರುಜುಗಳನ್ನು ಲೆಕ್ಕಿಸಿರಿ.
ಕೀರ್ತ 48 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019