Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 49

ಕೀರ್ತ 49:1-8

Help us?
Click on verse(s) to share them!
1ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸಕಲ ದೇಶಗಳ ಜನರೇ, ಕೇಳಿರಿ; ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ.
2ಜನರೇ, ಜನಾಧಿಪತಿಗಳೇ, ಬಡವರೇ ಮತ್ತು ಐಶ್ವರ್ಯವಂತರೇ, ನೀವೆಲ್ಲರೂ ಒಂದಾಗಿ ಬಂದು ಆಲಿಸಿರಿ.
3ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವುದು; ನನ್ನ ಹೃದಯದ ಧ್ಯಾನವು ವಿವೇಕದಿಂದ ಕೂಡಿದೆ.
4ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, ಅದರ ಗೂಡಾರ್ಥವನ್ನು ಪ್ರಕಟಿಸುವೆನು.
5ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು? ಶತ್ರುಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಏಕೆ ಹೆದರಬೇಕು?
6ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.
7ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು.
8ಅವನ ಪ್ರಾಣವು ಶಾಶ್ವತವಾಗಿ ಉಳಿಯಲು, ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು.

Read ಕೀರ್ತ 49ಕೀರ್ತ 49
Compare ಕೀರ್ತ 49:1-8ಕೀರ್ತ 49:1-8