Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 49

ಕೀರ್ತ 49:3-9

Help us?
Click on verse(s) to share them!
3ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವುದು; ನನ್ನ ಹೃದಯದ ಧ್ಯಾನವು ವಿವೇಕದಿಂದ ಕೂಡಿದೆ.
4ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, ಅದರ ಗೂಡಾರ್ಥವನ್ನು ಪ್ರಕಟಿಸುವೆನು.
5ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು? ಶತ್ರುಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಏಕೆ ಹೆದರಬೇಕು?
6ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.
7ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು.
8ಅವನ ಪ್ರಾಣವು ಶಾಶ್ವತವಾಗಿ ಉಳಿಯಲು, ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು.
9ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ, ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು.

Read ಕೀರ್ತ 49ಕೀರ್ತ 49
Compare ಕೀರ್ತ 49:3-9ಕೀರ್ತ 49:3-9