Text copied!
Bibles in Kannada

ಕೀರ್ತ 49:3-9 in Kannada

Help us?

ಕೀರ್ತ 49:3-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವುದು; ನನ್ನ ಹೃದಯದ ಧ್ಯಾನವು ವಿವೇಕದಿಂದ ಕೂಡಿದೆ.
4 ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, ಅದರ ಗೂಡಾರ್ಥವನ್ನು ಪ್ರಕಟಿಸುವೆನು.
5 ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು? ಶತ್ರುಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಏಕೆ ಹೆದರಬೇಕು?
6 ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.
7 ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು.
8 ಅವನ ಪ್ರಾಣವು ಶಾಶ್ವತವಾಗಿ ಉಳಿಯಲು, ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು.
9 ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ, ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು.
ಕೀರ್ತ 49 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019