Text copied!
Bibles in Kannada

ಕೀರ್ತ 49:5-10 in Kannada

Help us?

ಕೀರ್ತ 49:5-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು? ಶತ್ರುಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಏಕೆ ಹೆದರಬೇಕು?
6 ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.
7 ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು.
8 ಅವನ ಪ್ರಾಣವು ಶಾಶ್ವತವಾಗಿ ಉಳಿಯಲು, ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು.
9 ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ, ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು.
10 ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.
ಕೀರ್ತ 49 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019