Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 4

ಕೀರ್ತ 4:1-4

Help us?
Click on verse(s) to share them!
1ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು.
2ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ, ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ? ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? ಸೆಲಾ
3ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ. ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ.
4ಭಯಪಡಿರಿ, ಪಾಪಮಾಡಬೇಡಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. ಸೆಲಾ

Read ಕೀರ್ತ 4ಕೀರ್ತ 4
Compare ಕೀರ್ತ 4:1-4ಕೀರ್ತ 4:1-4