Text copied!
Bibles in Kannada

ಕೀರ್ತ 50:10-23 in Kannada

Help us?

ಕೀರ್ತ 50:10-23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕಾಡಿನಲ್ಲಿರುವ ಸರ್ವಮೃಗಗಳೂ, ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ.
11 ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ; ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು.
12 ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ; ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ.
13 ನಾನು ಹೋರಿಗಳ ಮಾಂಸವನ್ನು ತಿನ್ನುವುದೂ, ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ?
14 ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.
15 ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.
16 ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?
17 ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.
18 ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.
19 ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ; ನಾಲಿಗೆಯು ಮೋಸವನ್ನು ನೇಯುತ್ತದೆ.
20 ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ.
21 ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.
22 ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.
23 ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”
ಕೀರ್ತ 50 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019