3ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.
4ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ.
5“ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ.
6ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ
7ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ.
8ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.
9ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ.
10ಕಾಡಿನಲ್ಲಿರುವ ಸರ್ವಮೃಗಗಳೂ, ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ.
11ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ; ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು.