Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 50

ಕೀರ್ತ 50:4-19

Help us?
Click on verse(s) to share them!
4ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ.
5“ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ.
6ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ
7ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ.
8ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.
9ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ.
10ಕಾಡಿನಲ್ಲಿರುವ ಸರ್ವಮೃಗಗಳೂ, ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ.
11ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ; ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು.
12ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ; ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ.
13ನಾನು ಹೋರಿಗಳ ಮಾಂಸವನ್ನು ತಿನ್ನುವುದೂ, ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ?
14ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.
15ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.
16ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?
17ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.
18ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.
19ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ; ನಾಲಿಗೆಯು ಮೋಸವನ್ನು ನೇಯುತ್ತದೆ.

Read ಕೀರ್ತ 50ಕೀರ್ತ 50
Compare ಕೀರ್ತ 50:4-19ಕೀರ್ತ 50:4-19