Text copied!
Bibles in Kannada

ಕೀರ್ತ 51:3-15 in Kannada

Help us?

ಕೀರ್ತ 51:3-15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
4 ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.
5 ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.
6 ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.
7 ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.
8 ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.
9 ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.
10 ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.
11 ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.
12 ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.
13 ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.
14 ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು.
15 ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.
ಕೀರ್ತ 51 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019