3 ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
4 ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.
5 ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.
6 ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.
7 ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.
8 ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.