Text copied!
Bibles in Kannada

ಕೀರ್ತ 51:7-13 in Kannada

Help us?

ಕೀರ್ತ 51:7-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.
8 ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.
9 ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.
10 ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.
11 ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.
12 ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.
13 ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.
ಕೀರ್ತ 51 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019