Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ

ಕೀರ್ತ 54

Help us?
Click on verse(s) to share them!
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಜಿಫ್ಯರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ ದಾವೀದನು ರಚಿಸಿದ ಪದ್ಯ. ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು.
2ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮಾತುಗಳಿಗೆ ಕಿವಿಗೊಡು.
3ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವುದೇ ಇಲ್ಲ. ಸೆಲಾ
4ಇಗೋ, ದೇವರೇ ನನಗೆ ಸಹಾಯಕನು; ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು.
5ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ. ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು.
6ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.
7ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ, ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ.