Text copied!
Bibles in Kannada

ಕೀರ್ತ 54:1-4 in Kannada

Help us?

ಕೀರ್ತ 54:1-4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಜಿಫ್ಯರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ ದಾವೀದನು ರಚಿಸಿದ ಪದ್ಯ. ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು.
2 ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮಾತುಗಳಿಗೆ ಕಿವಿಗೊಡು.
3 ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವುದೇ ಇಲ್ಲ. ಸೆಲಾ
4 ಇಗೋ, ದೇವರೇ ನನಗೆ ಸಹಾಯಕನು; ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು.
ಕೀರ್ತ 54 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019