Text copied!
Bibles in Kannada

ಕೀರ್ತ 55:10-20 in Kannada

Help us?

ಕೀರ್ತ 55:10-20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು; ಊರೊಳಗೆ ಕೇಡು, ತೊಂದರೆಗಳು ಪ್ರಬಲವಾಗಿವೆ.
11 ಅದರೊಳಗೆಲ್ಲಾ ನಾಶನವೇ; ದಬ್ಬಾಳಿಕೆ ಮತ್ತು ವಂಚನೆ ಅದರ ಬೀದಿಗಳಿಂದ ತೊಲಗವು.
12 ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು.
13 ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ.
14 ನಾವು ಪರಸ್ಪರವಾಗಿ ರಸಭರಿತ ಸಂಭಾಷಣೆ ಮಾಡುತ್ತಾ ಭಕ್ತಸಮೂಹದೊಡನೆ ದೇವಾಲಯಕ್ಕೆ ಹೋಗುತ್ತಿದ್ದೆವಲ್ಲಾ.
15 ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.
16 ನಾನಂತೂ ದೇವರಾದ ಯೆಹೋವನಿಗೆ ಮೊರೆಯಿಡುವೆನು; ಆತನು ನನ್ನನ್ನು ರಕ್ಷಿಸುವನು.
17 ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. ಆತನು ಹೇಗೂ ನನ್ನ ಮೊರೆಯನ್ನು ಕೇಳಿ
18 ನನ್ನ ವಿರೋಧಿಗಳು ಅನೇಕರಿದ್ದರೂ ಅವರು ನನ್ನನ್ನು ಮುಟ್ಟದಂತೆ ಸುರಕ್ಷಿತವಾಗಿ ಇಡುವನು.
19 ಅನಾದಿಕಾಲದಿಂದ ಆಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟು ಅವರನ್ನು ತಗ್ಗಿಸಿಬಿಡುವನು. ಸೆಲಾ ಅವರು ತಮ್ಮ ಸುಖವು ಕದಲದೆಂದುಕೊಂಡು ದೇವರಿಗೆ ಹೆದರುವುದಿಲ್ಲ.
20 ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.
ಕೀರ್ತ 55 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019