Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 55

ಕೀರ್ತ 55:12-19

Help us?
Click on verse(s) to share them!
12ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು.
13ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ.
14ನಾವು ಪರಸ್ಪರವಾಗಿ ರಸಭರಿತ ಸಂಭಾಷಣೆ ಮಾಡುತ್ತಾ ಭಕ್ತಸಮೂಹದೊಡನೆ ದೇವಾಲಯಕ್ಕೆ ಹೋಗುತ್ತಿದ್ದೆವಲ್ಲಾ.
15ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.
16ನಾನಂತೂ ದೇವರಾದ ಯೆಹೋವನಿಗೆ ಮೊರೆಯಿಡುವೆನು; ಆತನು ನನ್ನನ್ನು ರಕ್ಷಿಸುವನು.
17ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. ಆತನು ಹೇಗೂ ನನ್ನ ಮೊರೆಯನ್ನು ಕೇಳಿ
18ನನ್ನ ವಿರೋಧಿಗಳು ಅನೇಕರಿದ್ದರೂ ಅವರು ನನ್ನನ್ನು ಮುಟ್ಟದಂತೆ ಸುರಕ್ಷಿತವಾಗಿ ಇಡುವನು.
19ಅನಾದಿಕಾಲದಿಂದ ಆಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟು ಅವರನ್ನು ತಗ್ಗಿಸಿಬಿಡುವನು. ಸೆಲಾ ಅವರು ತಮ್ಮ ಸುಖವು ಕದಲದೆಂದುಕೊಂಡು ದೇವರಿಗೆ ಹೆದರುವುದಿಲ್ಲ.

Read ಕೀರ್ತ 55ಕೀರ್ತ 55
Compare ಕೀರ್ತ 55:12-19ಕೀರ್ತ 55:12-19