Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 55

ಕೀರ್ತ 55:2-13

Help us?
Click on verse(s) to share them!
2ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು.
3ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ, ಹೊಯ್ದಾಡುತ್ತಾ ನರಳುತ್ತಿದ್ದೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ, ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.
4ನನ್ನ ಹೃದಯವು ನೊಂದು ಬೆಂದುಹೋಗಿದೆ; ಮರಣಭಯವು ನನ್ನನ್ನು ಆವರಿಸಿಕೊಂಡಿದೆ.
5ಅಂಜಿ ನಡುಗುತ್ತಿದ್ದೇನೆ; ದಿಗಿಲು ನನ್ನನ್ನು ಹಿಡಿದಿದೆ.
6ನಾನು, “ಆಹಾ, ನನಗೆ ರೆಕ್ಕೆಗಳಿದ್ದರೆ ಪಾರಿವಾಳದಂತೆ ಹಾರಿಹೋಗಿ ಆಶ್ರಯ ಸೇರಿಕೊಳ್ಳುತ್ತಿದ್ದೆನು.
7ಅವಸರದಿಂದ ಹಾನಿಕರವಾದ ಬಿರುಗಾಳಿಯಿಂದ ತಪ್ಪಿಸಿಕೊಂಡು,
8ದೂರ ಹೋಗಿ ಅರಣ್ಯಸ್ಥಳದಲ್ಲಿ ಪ್ರವಾಸಿಯಾಗಿರುತ್ತಿದ್ದೆನು” ಅಂದುಕೊಂಡೆನು. ಸೆಲಾ
9ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹ, ಬಲಾತ್ಕಾರಗಳು ಕಾಣಬರುತ್ತವೆ.
10ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು; ಊರೊಳಗೆ ಕೇಡು, ತೊಂದರೆಗಳು ಪ್ರಬಲವಾಗಿವೆ.
11ಅದರೊಳಗೆಲ್ಲಾ ನಾಶನವೇ; ದಬ್ಬಾಳಿಕೆ ಮತ್ತು ವಂಚನೆ ಅದರ ಬೀದಿಗಳಿಂದ ತೊಲಗವು.
12ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು.
13ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ.

Read ಕೀರ್ತ 55ಕೀರ್ತ 55
Compare ಕೀರ್ತ 55:2-13ಕೀರ್ತ 55:2-13