4ನನ್ನ ಹೃದಯವು ನೊಂದು ಬೆಂದುಹೋಗಿದೆ; ಮರಣಭಯವು ನನ್ನನ್ನು ಆವರಿಸಿಕೊಂಡಿದೆ.
5ಅಂಜಿ ನಡುಗುತ್ತಿದ್ದೇನೆ; ದಿಗಿಲು ನನ್ನನ್ನು ಹಿಡಿದಿದೆ.
6ನಾನು, “ಆಹಾ, ನನಗೆ ರೆಕ್ಕೆಗಳಿದ್ದರೆ ಪಾರಿವಾಳದಂತೆ ಹಾರಿಹೋಗಿ ಆಶ್ರಯ ಸೇರಿಕೊಳ್ಳುತ್ತಿದ್ದೆನು.
7ಅವಸರದಿಂದ ಹಾನಿಕರವಾದ ಬಿರುಗಾಳಿಯಿಂದ ತಪ್ಪಿಸಿಕೊಂಡು,
8ದೂರ ಹೋಗಿ ಅರಣ್ಯಸ್ಥಳದಲ್ಲಿ ಪ್ರವಾಸಿಯಾಗಿರುತ್ತಿದ್ದೆನು” ಅಂದುಕೊಂಡೆನು. ಸೆಲಾ
9ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹ, ಬಲಾತ್ಕಾರಗಳು ಕಾಣಬರುತ್ತವೆ.
10ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು; ಊರೊಳಗೆ ಕೇಡು, ತೊಂದರೆಗಳು ಪ್ರಬಲವಾಗಿವೆ.