7ಅವಸರದಿಂದ ಹಾನಿಕರವಾದ ಬಿರುಗಾಳಿಯಿಂದ ತಪ್ಪಿಸಿಕೊಂಡು,
8ದೂರ ಹೋಗಿ ಅರಣ್ಯಸ್ಥಳದಲ್ಲಿ ಪ್ರವಾಸಿಯಾಗಿರುತ್ತಿದ್ದೆನು” ಅಂದುಕೊಂಡೆನು. ಸೆಲಾ
9ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹ, ಬಲಾತ್ಕಾರಗಳು ಕಾಣಬರುತ್ತವೆ.
10ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು; ಊರೊಳಗೆ ಕೇಡು, ತೊಂದರೆಗಳು ಪ್ರಬಲವಾಗಿವೆ.
11ಅದರೊಳಗೆಲ್ಲಾ ನಾಶನವೇ; ದಬ್ಬಾಳಿಕೆ ಮತ್ತು ವಂಚನೆ ಅದರ ಬೀದಿಗಳಿಂದ ತೊಲಗವು.
12ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು.
13ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ.
14ನಾವು ಪರಸ್ಪರವಾಗಿ ರಸಭರಿತ ಸಂಭಾಷಣೆ ಮಾಡುತ್ತಾ ಭಕ್ತಸಮೂಹದೊಡನೆ ದೇವಾಲಯಕ್ಕೆ ಹೋಗುತ್ತಿದ್ದೆವಲ್ಲಾ.
15ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.