4ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು?
5ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ; ಅವರು ಬಗೆಯುವುದೆಲ್ಲ ನನಗೆ ಕೇಡೇ.
6ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ.
7ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ? ದೇವರೇ, ರೌದ್ರದಿಂದ ಆ ಜನಾಂಗಗಳನ್ನು ಉರುಳಿಸಿಬಿಡು.
8ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.
9ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; ದೇವರು ನನ್ನ ಸಂಗಡ ಇರುವುದು ನಿಶ್ಚಯ.
10ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. ಯೆಹೋವನಲ್ಲಿ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ.
11ದೇವರನ್ನು ನಂಬಿ ನಿರ್ಭಯದಿಂದಿರುವೆನು; ನರಪ್ರಾಣಿಗಳು ನನಗೆ ಏನು ಮಾಡಾರು?