Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 57

ಕೀರ್ತ 57:1-6

Help us?
Click on verse(s) to share them!
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಅಲ್ತಷ್ಖೇತೆಂಬ ರಾಗ; ದಾವೀದನು ಸೌಲನ ಭೀತಿಯಿಂದ ಓಡಿಹೋಗಿ ಗುಹೆಯಲ್ಲಿ ಅಡಗಿಕೊಂಡಿದ್ದಾಗ ರಚಿಸಿದ ಕಾವ್ಯ. ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
2ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು.
3ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; ಸೆಲಾ ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.
4ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ.
5ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
6ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ

Read ಕೀರ್ತ 57ಕೀರ್ತ 57
Compare ಕೀರ್ತ 57:1-6ಕೀರ್ತ 57:1-6