3ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; ಸೆಲಾ ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.
4ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ.
5ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.