Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 58

ಕೀರ್ತ 58:1-8

Help us?
Click on verse(s) to share them!
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ದಾವೀದನ ಕಾವ್ಯ. ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?
2ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.
3ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.
4ಅವರು ಸರ್ಪದಂತೆ ವಿಷಭರಿತರು.
5ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ ಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ.
6ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಕಿತ್ತುಹಾಕು.
7ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.
8ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ.

Read ಕೀರ್ತ 58ಕೀರ್ತ 58
Compare ಕೀರ್ತ 58:1-8ಕೀರ್ತ 58:1-8