Text copied!
Bibles in Kannada

ಕೀರ್ತ 58:1-8 in Kannada

Help us?

ಕೀರ್ತ 58:1-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ದಾವೀದನ ಕಾವ್ಯ. ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?
2 ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.
3 ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.
4 ಅವರು ಸರ್ಪದಂತೆ ವಿಷಭರಿತರು.
5 ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ ಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ.
6 ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಕಿತ್ತುಹಾಕು.
7 ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.
8 ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ.
ಕೀರ್ತ 58 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019