Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 58

ಕೀರ್ತ 58:3-10

Help us?
Click on verse(s) to share them!
3ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.
4ಅವರು ಸರ್ಪದಂತೆ ವಿಷಭರಿತರು.
5ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ ಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ.
6ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಕಿತ್ತುಹಾಕು.
7ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.
8ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ.
9ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.
10ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.

Read ಕೀರ್ತ 58ಕೀರ್ತ 58
Compare ಕೀರ್ತ 58:3-10ಕೀರ್ತ 58:3-10