5ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ ಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ.
6ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಕಿತ್ತುಹಾಕು.
7ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.
8ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ.
9ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.