11ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ. ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.
12ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.
13ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ
14ಅವರು ಪ್ರತಿಸಾಯಂಕಾಲವೂ ಬಂದು ಬಂದು, ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾ ಇದ್ದಾರೆ.
15ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ; ಹೊಟ್ಟೆಗಿಲ್ಲದಿದ್ದರೆ ಗುಣುಗುಟ್ಟುತ್ತಾರೆ.