Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 59

ಕೀರ್ತ 59:2-7

Help us?
Click on verse(s) to share them!
2ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.
3ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ. ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ!
4ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಮುತ್ತಿಗೆ ಹಾಕಿ ನಿಂತಿದ್ದಾರೆ; ಎದ್ದು ಬಂದು ಪರಾಂಬರಿಸಿ ನನಗೆ ಸಹಾಯಮಾಡು.
5ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ. ಸೆಲಾ
6ಅವರು ಪ್ರತಿಸಾಯಂಕಾಲವೂ ಬಂದು ಬಂದು ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಿದ್ದಾರೆ.
7ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಹರಿತವಾದ ಕತ್ತಿಗಳಂತಿವೆ, ಅವರು, “ನಮ್ಮನ್ನು ಕೇಳುವವರು ಯಾರು?” ಅಂದುಕೊಳ್ಳುತ್ತಾರೆ.

Read ಕೀರ್ತ 59ಕೀರ್ತ 59
Compare ಕೀರ್ತ 59:2-7ಕೀರ್ತ 59:2-7